ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಬಲ ಬೆಲೆ ಖಾತ್ರಿ, ರೈತರಿಗೆ ಪಿಂಚಣಿ ಸೌಲಭ್ಯ ಇನ್ನಿತರ ಸೌಲಭ್ಯಗಳಿಗೆ ಬೇಡಿಕೆ ಇಟ್ಟು ಇಂದು ರೈತರು ದೆಹಲಿ ಚಲೋ ಪ್ರತಿಭಟನೆ ನಡೆಸಲಿದ್ದಾರೆ.
ಅತೀ ಹೆಚ್ಚು ಸಂಖ್ಯೆಯಲ್ಲಿ ದೆಹಲಿಗೆ ರೈತರು ಕಾಲಿಡುತ್ತಿದ್ದು, ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರತಿಭಟನೆ ತಡೆಗೆ ಗಡಿಯಲ್ಲಿ 5,000 ಕ್ಕೂ ಹೆಚ್ಚು ಪೊಲೀಸರು ನಿಂತಿದ್ದಾರೆ. ತಂತಿಗಳಿಂದ ಹಾಗೂ ಬ್ಯಾರಿಕೇಡ್ಗಳಿಂದ ಗಡಿ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೆಹಲಿಯಲ್ಲಿ ರ್ಯಾಲಿ, ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಪಂಜಾಬ್, ಹರಿಯಾಣ, ಕರ್ನಾಟಕ ಹಾಗೂ ಉತ್ತರ ಪ್ರದೇಶದ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಒಟ್ಟಾರೆ 25,000 ಕ್ಕೂ ಹೆಚ್ಚು ರೈತರು ಆಗಮಿಸುವ ಸಾಧ್ಯತೆ ಇದೆ.