March 12, 2026
Thursday, March 12, 2026
spot_img

ಸಚಿವ ಸ್ಥಾನದ ಮೇಲೆ ಅರಸೀಕೆರೆ ಶಾಸಕರ ಕಣ್ಣು: ‘ಕೈ’ ಹಿಡಿಯುತ್ತಾ ಅದೃಷ್ಟ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನರ್‌ರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಈ ಬಾರಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆಯಾದಾಗ ತಮಗೆ ಸಚಿವ ಸ್ಥಾನ ಲಭಿಸುವುದು ಖಚಿತ ಎಂದು ಶಿವಲಿಂಗೇಗೌಡರು ತಿಳಿಸಿದ್ದಾರೆ.

“ಸಂಪುಟ ಪುನರ್ ರಚನೆ ಆದಾಗ ನನಗೆ ಸಚಿವ ಸ್ಥಾನ ನೀಡುವುದಾಗಿ ಎಲ್ಲಾ ಹಿರಿಯ ನಾಯಕರು ಭರವಸೆ ನೀಡಿದ್ದಾರೆ. ವಿಸ್ತರಣೆ ಯಾವಾಗ ಆಗುತ್ತದೆ ಎಂಬ ನಿಖರ ಮಾಹಿತಿ ನನಗಿಲ್ಲ, ಆದರೆ ಆದಾಗ ನನಗೆ ಸ್ಥಾನ ಸಿಗುವ ವಿಶ್ವಾಸವಿದೆ,” ಎಂದು ನುಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !