ಕಮೀಷನ್ ಆರೋಪದಲ್ಲಿ ಕೆಂಪಣ್ಣ ಉಲ್ಟಾ: ಸಿಎಂ, ಡಿಸಿಎಂ ಎಲ್ಲಾ ರೀತಿ ಸಹಕಾರ ನೀಡುತ್ತಿದ್ದಾರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹಿಂದಿನ ಬಿಜೆಪಿ ಸರ್ಕಾರದವಿರುದ್ಧಶೇ.40ರಷ್ಟು ಕಮೀಷನ್ ಆರೋಪ ಮಾಡಿದ್ದಂತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧವೂ ಮಾಡಿದ್ದರು. ಆದ್ರೇ ಇದೀಗ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹಕಾರ ನೀಡುತ್ತಿದ್ದಾರೆ ಎಂಬುದಾಗಿ ಉಲ್ಟಾ ಹೊಡೆದಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿಡ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರವನ್ನು ಗುತ್ತಿಗೆದಾರರಿಗೆ ನೀಡುತ್ತಿದ್ದಾರೆ. ಶೀಘ್ರವೇ ಬಿಬಿಎಂಪಿಯ ಬಾಕಿ ಬಿಲ್ ಕೂಡ ಬಿಡುಗಡೆ ಮಾಡೋದಾಗಿ ಭರವಸೆ ನೀಡಿದ್ದಾರೆ ಎಂದರು.

ಸರ್ಕಾರದಿಂದ 1054 ಸಣ್ಣ ಗುತ್ತಿಗೆದಾರರ 1 ಕೋಟಿಗಿಂತ ಕಡಿಮೆ ಇರುವಂತ ಬಿಲ್ ಅನ್ನು 600 ಕೋಟಿ ರೂಪಾಯಿ ಹಣವನ್ನು ಲೋಕೋಪಯೋಗಿ ಇಲಾಖೆಯಿಂದ ಯಾವುದೇ ಲಂಚವನ್ನು ಪಡೆದೇ ಬಿಡುಗಡೆ ಮಾಡಿರೋದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!