ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ವರ್ಷದ ಮಗುವನ್ನು ಕೊಂದು ಸೂಟ್ಕೇಸ್ನಲ್ಲಿಟ್ಟು ಸಿಕ್ಕಿಬಿದ್ದಿದ್ದ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪನಿ ಸಿಇಒ ಸುಚನಾ ಸೇಠ್ ಕೇಸ್ನಲ್ಲಿ ಮತ್ತೊಂದು ರೋಚಕ ತಿರುವು ಎದುರಾಗಿದೆ.
ಮಗನನ್ನು ಕೊಂದ ಸುಚನಾ ಮಾನಸಿಕ ಸಮಸ್ಯೆಗಳನ್ನು ಹೊಂದಿದ್ದು, ಮಾತ್ರೆಗಳನ್ನು ಸೇವಿಸುತ್ತಿದ್ದರು ಎಂದು ಹೇಳಲಾಗಿತ್ತು, ಆದರೆ ಆಕೆ ಯಾವುದೇ ಮಾನಸಿಕ ಸಮಸ್ಯೆ ಹೊಂದಿಲ್ಲ ಎಂದು ಗೋವಾ ಪೊಲೀಸರು ಹೇಳಿದ್ದಾರೆ.
ಸುಚನಾಳನ್ನು ಮಾನಸಿಕ ಪರೀಕ್ಷೆಗೆ ಒಳಪಡಿಸಿದ್ದು, ಪರೀಕ್ಷಾ ವರದಿಯಲ್ಲಿ ಸುಚನಾಗೆ ಯಾವುದೇ ಮಾನಸಿಕ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ. ಗಂಡನ ಮೇಲಿನ ಅತಿಯಾದ ಕೋಪದಿಂದ ಈ ರೀತಿ ಮಾಡಿರಬಹುದು ಎಂದು ಹೇಳಲಾಗಿದೆ.