ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಬದಿ ನಿಲ್ಲಿಸಿದ್ದ ಮಿನಿ ಟೆಂಪೋಗೆ ವೇಗವಾಗಿ ಬಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಸೇತುವೆ ಬಳಿ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದ್ದು, ಚಾಲಕ ಪ್ರಭುಗೌಡ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಮತ್ತೋರ್ವ ಆನಂದ್ (30) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಮೃತರು ಉತ್ತರ ಕರ್ನಾಟಕದವರು ಎನ್ನಲಾಗಿದೆ. ಟಯರ್ ಪಂಚರ್ ಆದ ಕಾರಣ ಮಿನಿ ಟೆಂಪೋವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಹಿಂದೆಯಿಂದ ಬಂದ ದ್ವಿಚಕ್ರವಾಹನವು ಟೆಂಪೋಗೆ ಡಿಕ್ಕಿ ಹೊಡೆದಿದೆ.
ಇನ್ನು ಈ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.