ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು,ಈ ನಡುವೆ ತನ್ನ ಪಕ್ಷವು ಎಲ್ಲಾ ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ.
ಇಂಡಿಯಾ ಬಣ ಜೊತೆ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾತುಕತೆ ವಿಫಲವಾದ ಹಿನ್ನೆಲೆ ನ್ಯಾಷನಲ್ ಕಾನ್ಫರೆನ್ಸ್ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ಅದರ ಅರ್ಹತೆಯ ಆಧಾರದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.
ಕಳೆದ ತಿಂಗಳು, ಜಮ್ಮು ಪ್ರದೇಶದ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ನ ಹಲವಾರು ಉನ್ನತ ನಾಯಕರು ಬಿಜೆಪಿಗೆ ಸೇರಿದರು.2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಅಬ್ದುಲ್ಲಾ ಅವರ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ತಲಾ ಮೂರು ಸ್ಥಾನಗಳನ್ನು ಗೆದ್ದಿವೆ.