ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಜೆಟ್ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ.
ಈ ಬಾರಿ ಚಿಕ್ಕೋಡಿ ಹಾಗೂ ಗೋಕಾಕ ನೂನತ ಜಿಲ್ಲೆಗಳಾಗಿ ಘೋಷಣೆ ಆಗಲಿದೆಯಾ ಎಂಬ ಪ್ರಶ್ನೆಗೆ ಬಜೆಟ್ನಲ್ಲಿ ಉತ್ತರ ಸಿಗಲಿದೆ ಎನ್ನಲಾಗಿದೆ.
1997 ರಲ್ಲಿ ಅಂದಿನ ಸರ್ಕಾರ ಚಿಕ್ಕೋಡಿ, ಗೋಕಾಕ ಜಿಲ್ಲೆಯನ್ನಾಗಿ ಘೋಷಣೆ ಮಾಡಿತ್ತು. ಆದರೆ ಗಡಿ ವಿವಾದದ ಕಾರಣ ವಿಭಜನೆ ವಾಪಾಸ್ ಪಡೆಯಲಾಗಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಲಿದ್ದಾರೆ ಎಂದು ಜನರು ಕಾದು ಕುಳಿತಿದ್ದಾರೆ.