ಹೊಸದಿಗಂತ, ವಿಜಯಪುರ:
ಚಲಿಸುತ್ತಿದ್ದ ಲಾರಿ ಟೈಯರ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಸುಟ್ಟು ಭಸ್ಮವಾಗಿರುವ ಘಟನೆ ಗುರುವಾರ ರಾತ್ರಿ ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದ ಬಳಿ ನಡೆದಿದೆ.
ರಾಜಸ್ಥಾನದಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಲಾರಿಗೆ ರಸ್ತೆಯಲ್ಲಿಯೇ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ವ್ಯಾಪಿಸುತ್ತಿದ್ದಂತೆ ಚಾಲಕ ಹಾಗೂ ಕ್ಲೀನರ್ ಕೆಳಗಿಳಿದು ಕೂದಲೆಳೆ ಅಂತರದಲ್ಲಿ ಅಪಾಯದಿ0ದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಧಾವಿಸಿ ಬಂದು ಬೆಂಕಿ ನಂದಿಸಿದ್ದಾರೆ.
ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ