ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದಿನ ವೆದರ್ ಹೇಗಿರಲಿದೆ? ಮಳೆಯೋ ಬಿಸಿಲೋ? ಇಲ್ಲಿದೆ ಮಾಹಿತಿ..
ರಾಜ್ಯದ ಜಿಲ್ಲೆಗಳಲ್ಲಿ ಇಂದು ಕೂಡ ಬಿಸಿಲಿನ ವಾತಾವರಣ ಹಾಗೂ ಒಣಹವೆ ಮುಂದುವರಿಯಲಿದೆ. ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಇಂದು ಮಳೆ ಮುನ್ಸೂಚನೆ ಇಲ್ಲ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.