ಚಿತ್ರದುರ್ಗ ಜಿ.ಪಂ. ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಅನಾವರಣ

ಹೊಸದಿಗಂತ , ಚಿತ್ರದುರ್ಗ: 

‘ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಅದರಂತೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಶನಿವಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ವಿಶ್ವ ಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ನುಡಿದಂತೆ ನೆಡೆದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗರಹಿತ, ಜಾತಿರಹಿತ, ಮೌಢ್ಯಗಳಿಲ್ಲದ ವೈಚಾರಿಕತೆ ಸಮಾಜ ಸ್ಥಾಪನೆಯ ಆಶಯದಿಂದ ಅವರು ವಚನಗಳನ್ನು ರಚಿಸಿದರು. ಕಾಯಕ, ದಾಸೋಹ ಬೋಧಿಸಿದ ಬಸವಣ್ಣನವರು ಯಾರು ಕುಳಿತು ತಿನ್ನದೆ ಕಾಯಕದಲ್ಲಿ ತೊಡಗಬೇಕೆಂದು ಪ್ರತಿಪಾದಿಸಿದ್ದರು. ಇಂತಹ ಮಹಾನ್ ವ್ಯಕ್ತಿಯ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು, ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!