ಕೃಷಿ ಪರಿಕರಗಳ ಅಕ್ರಮ ಮಾರಾಟ: ರೈತ ಸಂಪರ್ಕ ಅಧಿಕಾರಿ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಳಸಂತೆಯಲ್ಲಿ ಕೃಷಿ ಪರಿಕರ ಮಾರಾಟಕ್ಕೆ ಸಂಬಂಧಿಸಿದಂತೆ ಯಡ್ರಾಮಿ ತಾಲೂಕು ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಯನ್ನು ಅಮಾನತುಗೊಳಿಸಿ ಕಲಬುರಗಿ ಜಂಟಿ ಕೃಷಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಫೆ.14ರಂದು ಟ್ರ್ಯಾಕ್ಟರ್‌ನಲ್ಲಿ 100 ಚೀಲ ಎರೆಹುಳು ಎರಕ ಹಾಗೂ 30 ಪಿವಿಸಿ ಪೈಪ್‌ಗಳನ್ನು ಅಕ್ರಮವಾಗಿ ಸಾಗಿಸಲಾಗಿತ್ತು. ಈ ವೇಳೆ ಗ್ರಾಮಸ್ಥರೆಲ್ಲ ಸೇರಿ ಟ್ರ್ಯಾಕ್ಟರ್ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆ ಬಳಿಕ ಅಪರಾಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!