ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಅತ್ಯಂತ ಜನಪ್ರಿಯ ಸಿಎಂ ಯಾರು ಎಂದು ಕೇಳಿದರೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಂದು ಬಹುತೇಕರು ಹೇಳುತ್ತಾರೆ. ಆದರೆ, ದೇಶದ ಅತ್ಯಂತ ಜನಪ್ರಿಯ ಸಿಎಂ ಎಂದರೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್. ಇತ್ತೀಚಿನ ಸಮೀಕ್ಷೆಯ ಪ್ರಕಾರ, ನವೀನ್ ಪಟ್ನಾಯಕ್ ದೇಶದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿ ಮೊದಲ ಸ್ಥಾನದಲ್ಲಿದ್ದರೆ, ಯೋಗಿ ಆದಿತ್ಯನಾಥ್ ಎರಡನೇ ಸ್ಥಾನದಲ್ಲಿದ್ದಾರೆ.
ಜನಪ್ರಿಯತೆ ಮತ್ತು ಜನಮೆಚ್ಚುಗೆಯ ಸಮೀಕ್ಷೆಯಲ್ಲಿ ನವೀನ್ ಪಟ್ನಾಯಕ್ 52.7% ಅಷ್ಟು ರೇಟಿಂಗ್ ಪಡೆದಿದ್ದಾರೆ. ಯೋಗಿ ಆದಿತ್ಯನಾಥ್ ಶೇ.51.3 ಅಷ್ಟು ರೇಟಿಂಗ್ ಪಡೆದಿದ್ದಾರೆ. ಅಲ್ಲದೆ, ಬಹಿರಂಗ ಹೇಳಿಕೆಗಳಿಗೆ ಹೆಸರಾಗಿರುವ ಅಸ್ಸಾಂ ಮುಖ್ಯಮಂತ್ರಿ ಬಿಸ್ವಾ ಶರ್ಮಾ ಅವರು ಶೇ 48.6 ರೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಶೇ.42.6ರಷ್ಟು ಮತ ಪಡೆದು ನಾಲ್ಕನೇ ಸ್ಥಾನದಲ್ಲಿದ್ದಾರೆ.