ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಈ ಹಿಂದೆ ಮಾಡಿದ ಎಲ್ಲಾ ದಾಖಲೆಗಳನ್ನು ಬದಿಗಿಟ್ಟು ಇನ್ನಷ್ಟು ಹೊಸ ದಾಖಲೆ ಬರೆಯಲು ಕಾರ್ಯತಂತ್ರ ರೂಪಿಸಬೇಕು ಎಂದು ಎಂದು ಪ್ರತಿನಿಧಿಗಳಿಗೆ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ ಕರೆ ನೀಡಿದ್ದಾರೆ.
ದಿಲ್ಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮೋದಿ ಸರ್ಕಾರ ಹ್ಯಾಟ್ರಿಕ್ ಸಾಧನೆ ಮಾಡಲಿದ್ದಾರೆ. ಸತತ ಮೂರನೇ ಬಾರಿಗೆ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.
ಪಕ್ಷವು ಮುಂಬರುವ ಚುನಾವಣೆಯಲ್ಲಿ 370ಕ್ಕಿಂತಲೂ ಹೆಚ್ಚು ಸೀಟುಗಳನ್ನು ಗೆಲ್ಲಬೇಕು. ಎನ್‌ಡಿಎ ಮೈತ್ರಿಕೂಟ 400 ಸೀಟುಗಳ ಅಂಕಿ ದಾಟಬೇಕು. ಈ ಸಾಧನೆಯನ್ನು ಮಾಡಲು ಪಕ್ಷದ ಎಲ್ಲ ನಾಯಕರು ಶ್ರಮಿಸಬೇಕು ಎಂದು ಅವರು ಹೇಳಿದರು. ಎರಡು ದಿನಗಳ ಈ ಮಂಡಳಿ ಸಭೆಯಲ್ಲಿ 11,500 ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.