ಕಾಡಾನೆ ದಾಳಿ: ಇಬ್ಬರು ಮಹಿಳೆಯರು ಸೇರಿ ಮೂರು ಹಸುಗಳು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಗಡಿಭಾಗ ತಮಿಳುನಾಡಿನ ಅಣ್ಣಿಯಾಳ ಬಳಿ ತೋಟದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಆನೆ ದಾಳಿ ಮಾಡಿದೆ. ಕಾಡಾನೆ ದಾಳಿಗೆ ಇಬ್ಬರು ಮಹಿಳೆಯರು ಮತ್ತು ಮೂರು ಹಸುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಣ್ಣಿಯಾಳ ಗ್ರಾಮದ ಅನಂತ್, ವಸಂತಮ್ಮ ಮತ್ತು ದಾಸರಿ ಪಲ್ಲಿಯ ವೆಂಕಟೇಶ್- ಅಶ್ವರ್ಥಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಆನೆ ತೋಟಕ್ಕೆ ನುಗ್ಗಿ ಅಶ್ವರ್ಥಮ್ಮ ಹಾಗೂ ವಸಂತಮ್ಮ ಮೇಲೆ ದಾಳಿ ಮಾಡಿದೆ. ಆನೆಯಿಂದ ತಪ್ಪಿಸಿಕೊಳ್ಳಲು ಆಗದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!