ಬಸ್‌ ಸ್ಟ್ಯಾಂಡ್‌ನಲ್ಲಿ ಗ್ಯಾಸ್‌ ಸ್ಟವ್‌ ಮಾದರಿಯ ವಸ್ತು ಸ್ಫೋಟ: ಇಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗದ ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ವಸ್ತುವೊಂದು ಸ್ಫೋಟಗೊಂಡು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಗ್ಯಾಸ್ ಒಲೆಯಂತಿದ್ದ ವಸ್ತುವೊಂದು ಸ್ಫೋಟಗೊಂಡಿದೆ. ಈ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ವಸ್ತುವಿನ ಸ್ಫೋಟವು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅದೇನೇ ಇರಲಿ, ಈ ಘಟನೆಯು ಮಂಗಳೂರು ಬಾಂಬ್ ಸ್ಫೋಟವನ್ನು ನೆನಪಿಸುವಂತಿದೆ, ಆದರೆ ಇದೇ ರೀತಿಯ ಸ್ಫೋಟವೇ? ಆಕಸ್ಮಿಕವಾಗಿ ಒಲೆ ಸ್ಫೋಟಗೊಂಡಿದೆಯೇ ಅಥವಾ ಇಲ್ಲವೇ ಎಂಬುದು ಪೊಲೀಸ್ ತನಿಖೆಯಿಂದ ತಿಳಿಯುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!