ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಡಾಲಿ ಧನಂಜಯಗೆ ಕಾಂಗ್ರೆಸ್ ಸೀಟು ನೀಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿಯಾದ ನಂತರ ಮಳವಳ್ಳಿಗೆ ಮೊದಲ ಬಾರಿಗೆ ಆಗಮಿಸಿದ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಡಾಲಿ ಧನಂಜಯ ಸೀಟ್ ನೀಡುವ ವಿಚಾರವಾಗಿ ಯಾವುದೇ ಪ್ರಸ್ತಾವ ಬಂದಿಲ್ಲ ಎಂದ ಅವರು, ಪಕ್ಷಮಟ್ಟದಲ್ಲಿ ಈ ಬಗ್ಗೆ ಚರ್ಚೆಯೂ ನಡೆದಿಲ್ಲ. ಸ್ಥಳೀಯವಾಗಿ ಶಾಸಕರು, ಜಿಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಖಂಡರು ಯಾರನ್ನು ಸೂಚಿಸುತ್ತಾರೋ ಅವರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಹೇಳಿದರು.
ಕಳೆದ ಬಾರಿ ಚುನಾವಣೆಯಲ್ಲಿ ಮೈತ್ರಿಯಿಂದ ಬಿಜೆಪಿಯನ್ನು ಎದುರಿಸಿದ್ದೇವೆ. ಈ ಬಾರಿ ಏಕಾಂಗಿ ಹೋರಾಟ. ಬಿಜೆಪಿ ಎಲ್ಲಾ ೨೮ ಸ್ಥಾನ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ತಿಳಿದಿದೆ. ಅದಕ್ಕೆ ಸುಳ್ಳು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.