ಹಿಂದು ಅವಹೇಳನ ಪ್ರಕರಣ: ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿಯೇ ಸದ್ದುಮಾಡಿರುವ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಹಿಂದು ಅವಹೇಳನ ಘಟನೆಯ ಬೆನ್ನಲ್ಲೇ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರು ಹಾಗೂ ಹಿಂದೂ ಮುಖಂಡರ ಮೇಲೆ ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ ದಾಖಲಿಸಿದ್ದನ್ನು ಖಂಡಿಸಿ ಬಿಜೆಪಿ ಇಂದು ಅಪರಾಹ್ನ 3:30ಕ್ಕೆ ಮಂಗಳೂರು ನಗರದ ಮಿನಿ ವಿಧಾನಸೌಧ ಮುಂಭಾಗದ ಕ್ಲಾಕ್ ಟವರ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಯಲಿದೆ.

ರಾಜ್ಯ ಸರ್ಕಾರವು ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ನಡೆಸಿರುವ ಶ್ರೀರಾಮ ದೇವರು, ಪ್ರಧಾನಿ ನರೇಂದ್ರ ಮೋದಿಯವರ ಅವಹೇಳನವನ್ನು ಖಂಡಿಸಿದ್ದು, ಬಿಜೆಪಿ ಜನಪ್ರತಿನಿಧಿಗಳ ಮೇಲೆ ರಾಜಕೀಯ ಪ್ರೇರಿತ ದೂರು ದಾಖಲಿಸುತ್ತಿದೆ ಎಂದು ಕಿಡಿಕಾರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!