ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್:

2018 ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೀಡಿದ್ದ ಹೇಳಿಕೆಗಳ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ (Defamation Case) ಉತ್ತರ ಪ್ರದೇಶದ (Uttar Pradesh) ಸುಲ್ತಾನ್‍ಪುರದ ಸ್ಥಳೀಯ ನ್ಯಾಯಾಲಯ (Court) ಅವರಿಗೆ ಜಾಮೀನು ನೀಡಿದೆ.

ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಬಿಜೆಪಿ (BJP) ತನ್ನ ರಾಜಕೀಯ ಶುದ್ಧವಾಗಿದೆ ಎಂದು ಹೇಳಿಕೊಂಡಿದ್ದರೂ, ಕೊಲೆ ಪ್ರಕರಣದ ಆರೋಪಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಹೊಂದಿದೆ ಎಂದಿದ್ದರು. ಆಗ ಅಮಿತ್ ಶಾ ಬಿಜೆಪಿ ಅಧ್ಯಕ್ಷರಾಗಿದ್ದರು. ಈ ವಿಚಾರವಾಗಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಸುಲ್ತಾನ್‍ಪುರದ ಸ್ಥಳೀಯ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ ಜಾಮೀನು ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!