ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು, ಬಿಎಂಟಿಸಿ ಚಾಲಕನೊಬ್ಬ ಹೆದ್ದಾರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಬೆಂಗಳೂರಿನ ಹೊಸಕೋಟೆ ಟೋಲ್ ಪ್ಲಾಜಾ ಬಳಿಯಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನಿಸಿದಂತ ವೇಳೆಯಲ್ಲಿ ಆತನನ್ನು ಸ್ಥಳೀಯರು, ಬಸ್ ನಲ್ಲಿದ್ದಂತ ಪ್ರಯಾಣಿಕರು ರಕ್ಷಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು, ಚಾಲಕನನ್ನು ಮನವೊಲಿಸಿ, ಅಲ್ಲಿಂದ ಬಸ್ಸನ್ನು ಕಳುಹಿಸಿದ್ದಾರೆ.
ಈ ಇಡೀ ಘಟನೆ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿಯಲ್ಲಿ ನಡೆದಿದ್ದು, ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣಕ್ಕೂ ಕಾರಣವಾಗಿತ್ತು ಎನ್ನಲಾಗಿದೆ.