ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ಮತನಾದ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 1,600 ಮತಗಳಿಂದ ಜಯಗಳಿಸಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರಿ ಕಾಲಾ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕಾರ್ಯದಲ್ಲಿ ಮೂರು ಸುತ್ತುಗಳ ಮತ ಎಣಿಕೆ ನಡೆದಿತ್ತು. ಈ ವೇಳೆ ಕೊನೆಯ ಎರಡು ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಪುಟ್ಟಣ್ಣ ಗೆಲುವು ಖಚಿತವಾಗಿದೆ. ಮೂರನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಾಕ್ಷಣ ಪುಟ್ಟಣ್ಣ ಬೆಂಬಲಿಗರಿಂದ ಸಂಭ್ರಮಾಚರಣೆ ಮನೆ ಮಾಡಿದೆ.
ಒಟ್ಟು ಮತಗಳ ವಿವರ
ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪಡೆದ ಮತಗಳು: 8,260
ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ಪಡೆದ ಮತಗಳು: 6,753
ತಿರಸ್ಕೃತ ಮತಗಳು : 1,239
ಕೈ ಅಭ್ಯರ್ಥಿ ಪುಟ್ಟಣ್ಣ ಗೆಲುವಿನ ಅಂತರ: 1,507 ಮತಗಳು.