ಶಿವಮೊಗ್ಗದಲ್ಲಿ ಫೆ. 24 ರಂದು ಸರ್ಕಾರದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ

ಹೊಸದಿಗಂತ ವರದಿ ಶಿವಮೊಗ್ಗ:

ಸರ್ಕಾರದ ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆಬ್ರವರಿ 24ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ನಗರದ ಫ್ರೀಡಂ ಪಾರ್ಕ್‍ನಲ್ಲಿ ಫೆ. 24ರ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ ಫಲಾನುಭವಿಗಳು ಆಗಮಿಸಲಿದ್ದಾರೆ ಎಂದರು.

ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸುವ ನಿರೀಕ್ಷೆಯಿದ್ದು, ಅವರ ಅನುಕೂಲಕ್ಕಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯ, ಶೌಚಾಲಯ, ಕುಡಿಯುವ ನೀರು, ಮಧ್ಯಾಹ್ನದ ಉಪಹಾರ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಆಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಸಚಿವ ಸಂಪುಟದ ಕೆಲ ಸಚಿವರು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರು ಆಗಮಿಸಲಿದ್ದಾರೆ ಎಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ ಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ಅಧಿಕಾರಿ ಜಿ.ಕೆ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!