ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ. ಮಂಡ್ಯದಲ್ಲಿ ಬಿಜೆಪಿ ಉಳಿದರೆ ಪಕ್ಷ ಕಟ್ಟಲು ಸಹಕಾರಿಯಾಗಲಿದೆ ಎಂದು ಹೇಳಿದ್ದು, ನಾನು ಟಿಕೆಟ್‌ಗಾಗಿ ಎಂದಿಗೂ ಲಾಬಿ ಮಾಡಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರಲು ತಾಂತ್ರಿಕ ಅಡಚಣೆ ಇದೆ. ಅದಕ್ಕಾಗಿಯೇ ನಾನು ಬಾಹ್ಯ ಬೆಂಬಲ ನೀಡಿದ್ದೇನೆ. ಇದನ್ನು ಸ್ವತಃ ಬಿಜೆಪಿಯ ರಾಷ್ಟ್ರೀಯ ನಾಯಕರು ನನಗೆ ಹೇಳಿದ್ದಾರೆ. ಮೋದಿ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿಯಾದಾಗಲೂ ಮಂಡ್ಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾತನಾಡಿದ್ದೆ. ಮಂಡ್ಯ ಟಿಕೆಟ್ ಬಿಜೆಪಿಯೇ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ನಾನು ಟಿಕೆಟ್‌ಗಾಗಿ ಎಂದಿಗೂ ಲಾಬಿ ಮಾಡಿಲ್ಲ ಎಂದು ಹೇಳಿದ್ದಾರೆ.