Sunday, January 11, 2026

ಜನಾರ್ದನ ರೆಡ್ಡಿಗೆ ‘Z’ ಸೆಕ್ಯೂರಿಟಿ? ಪತ್ರ ಸಿಕ್ಕರೆ ಪರಿಶೀಲನೆ ಎಂದ ಗೃಹ ಸಚಿವ ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಕೋರಿರುವ ‘Z’ ಶ್ರೇಣಿಯ ಭದ್ರತೆಯ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೆಡ್ಡಿಯವರಿಂದ ಭದ್ರತೆ ಕೋರಿ ಯಾವುದೇ ಪತ್ರ ತಮಗೆ ಇನ್ನೂ ತಲುಪಿಲ್ಲ ಎಂದು ತಿಳಿಸಿದರು.

“ಜನಾರ್ದನ ರೆಡ್ಡಿ ಅವರ ಪತ್ರ ನನಗೆ ಬಂದಿಲ್ಲ. ಒಂದು ವೇಳೆ ಪತ್ರ ತಲುಪಿದರೆ, ನಿಯಮಗಳ ಪ್ರಕಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ನಡೆದ ಘಟನೆಗೆ ಸಂಬಂಧಿಸಿದಂತೆ ಶಾಸಕರು ಮತ್ತು ರೆಡ್ಡಿ ಇಬ್ಬರೂ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು,” ಎಂದು ಸಚಿವರು ಹೇಳಿದರು.

ಘಟನೆಯ ವೇಳೆ ಪೆಟ್ರೋಲ್ ಬಾಂಬ್ ಬಳಸಲಾಗಿದೆ ಎಂಬ ರೆಡ್ಡಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ತನಿಖೆ ನಡೆಯುತ್ತಿದೆ. ಅಲ್ಲಿ ಬಂದೂಕು, ಹ್ಯಾಂಡ್ ಗ್ರೆನೇಡ್ ಅಥವಾ ಪೆಟ್ರೋಲ್ ಬಾಂಬ್ ಏನೇ ಇದ್ದರೂ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ಪೊಲೀಸರು ಎಲ್ಲಾ ಆಯಾಮಗಳಿಂದಲೂ ಈ ಪ್ರಕರಣವನ್ನು ಪತ್ತೆ ಹಚ್ಚುತ್ತಿದ್ದಾರೆ,” ಎಂದರು.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!