ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಬೆಂಗಳೂರಿನ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ ಗುಡ್ನ್ಯೂಸ್ ನೀಡಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ.
ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ ವೋಲ್ವೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಮನೆಯಿಂದ ಪರೀಕ್ಷಾ ಕೊಠಡಿ ವರೆಗೆ ಉಚಿತವಾಗಿ ಪ್ರಯಾಣಿಸಬಹದು.
ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದ್ದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ.