ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಧೆಂಕಾನಾಲ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಭೀಕರ ಕಲ್ಲುಗಣಿ ದುರಂತದಲ್ಲಿ ಹಲವು ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಗಣಿಗಾರಿಕೆ ನಡೆಯುತ್ತಿದ್ದ ವೇಳೆ ಏಕಾಏಕಿ ಭಾರಿ ಪ್ರಮಾಣದ ಬಂಡೆಗಳು ಕುಸಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.
ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಕಾರ್ಮಿಕರು ಕಲ್ಲು ಗಣಿಗಾರಿಕೆಯಲ್ಲಿ ನಿರತರಾಗಿದ್ದಾಗ ಭೂ ಕುಸಿತ ಉಂಟಾಗಿದೆ. ಅಪಘಾತದ ಸಮಯದಲ್ಲಿ ಹಲವು ಕಾರ್ಮಿಕರು ಸ್ಥಳದಲ್ಲೇ ಇದ್ದರು ಎನ್ನಲಾಗಿದ್ದು, ಎಷ್ಟು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ: Snacks Series 3 | ಬದನೆಕಾಯಿ ಅಂತ ಮೂಗು ಮುರಿಬೇಡಿ ಅದ್ರಿಂದ ಬಜ್ಜಿ ಮಾಡಿ ನೋಡಿ!
ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ, ಒಡಿಶಾ ವಿಪತ್ತು ತ್ವರಿತ ಕಾರ್ಯಪಡೆ (ODRAF), ಶ್ವಾನ ದಳ ಮತ್ತು ಭಾರೀ ಯಂತ್ರೋಪಕರಣಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಘಟನೆಯ ನಿಖರ ಕಾರಣ ಮತ್ತು ಸಾವಿನ ಸಂಖ್ಯೆ ಕುರಿತು ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

