ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ (Jayadeva Hospital) ನಿವೃತ್ತ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ರಾಜ್ಯ ರಾಜಕೀಯ ಭಾರೀ ಚರ್ಚೆಯಾಗುತ್ತಿದ್ದು, ಈ ಕುರಿತು ಅವರೇ ಮಾತನಾಡಿದ್ದಾರೆ.
ಜನರು ನನ್ನ ಲೋಕಸಭಾ ಚುನಾವಣೆ (Lok Sabha Election) ಸ್ಪರ್ಧೆ ಬಗ್ಗೆ ಮಾತನಾಡುತ್ತಾ ಇದ್ದಾರೆ. ನಾನು ಇನ್ನೂ ಅದರ ಬಗ್ಗೆ ತೀರ್ಮಾನ ಮಾಡಿಲ್ಲ ಎಂದುಡಾ.ಸಿ.ಎನ್ ಮಂಜುನಾಥ್ (Dr.C.N.Manjunath) ಹೇಳಿದ್ದಾರೆ.
ರಾಜಕೀಯಕ್ಕೆ ಬರಬೇಕಾ?, ಲೋಕಸಭಾಗೆ ನಿಲ್ಲಬೇಕೆಂದು ನಿರ್ಧಾರ ಮಾಡಿಲ್ಲ. ಹಲವು ಕಡೆ ಜನರು ಒತ್ತಡ ಹಾಕುತ್ತಾ ಇದ್ದಾರೆ. ರಾಜ್ಯಮಟ್ಟದಲ್ಲಿ ಹೃದ್ರೋಗ ಚಿಕಿತ್ಸಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದೀರಾ. ಇದೇ ರೀತಿ ರಾಷ್ಟ್ರಮಟ್ಟದಲ್ಲೂ ಈ ರೀತಿಯ ಸುಧಾರಣೆ ಯಾಕೆ ತರಬಾರದು ಎಂದು ಹೇಳುತ್ತಿದ್ದಾರೆ. ಮುಂದೆ ಸ್ಪರ್ಧೆಯ ಬಗ್ಗೆ ತೀರ್ಮಾನ ಮಾಡಿದರೆ ಹೇಳುತ್ತೀನಿ ಎಂದು ಸ್ಪಷ್ಟನೆ ನೀಡಿದರು.
ನಾನು ಈಗಲೂ ಆಲೋಚನೆಯಲ್ಲಿಯೇ ಇದ್ದೀನಿ. ಲೋಕಸಭೆ ಪ್ರವೇಶ ಕೇವಲ ರಾಜಕೀಯ ಮೂಲಕವೇ ಅಲ್ಲ. ನನ್ನ ಅರ್ಥದಲ್ಲಿ ಲೋಕಸಭೆನೇ ಬೇರೆ, ರಾಜಕೀಯವೇ ಬೇರೆ. ಸದ್ಯ ಆಲೋಚನೆಯಲ್ಲಿ ಇದ್ದೀನಿ. ಮುಂದೆ ಈ ಬಗ್ಗೆ ಸ್ಪಷ್ಟ ನಿಲುವು ಹೇಳುತ್ತೇನೆ ಎಂದರು.