ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದಲ್ಲಿ ನಡೆದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಕುರಿತು ಮರು ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಸಂಬಂಧ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.
ಸೌಜನ್ಯಾಳ ಸಂಬಂಧಿ ಚಂದಪ್ಪ ಗೌಡ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ನ್ಯಾಯಪೀಠವು ಅರ್ಜಿದಾರರ ಪರ ವಕೀಲರು ಮಂಡಿಸಿದ ವಾದ ಆಲಿಸಿ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.