ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಗುಜರಾತ್ನ ವಲ್ಸಾದ್ ಜಿಲ್ಲೆಯ ವಘಲ್ಧಾರ ಗ್ರಾಮದ ಬಳಿ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ.
ಟ್ಯಾಂಕರ್ ಪಲ್ಟಿಯಾದಾಗ ಹೆದ್ದಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಅಪಘಾತದ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಕೊನೆಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ವೈರಲ್ ಆದ ವಿಡಿಯೋದಲ್ಲಿ ಟ್ಯಾಂಕರ್ ಪಲ್ಟಿಯಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಹೆದ್ದಾರಿಯಲ್ಲಿ ಟ್ಯಾಂಕರ್ ಲಾರಿ ಹೊತ್ತಿ ಉರಿಯುತ್ತಿರುವುದನ್ನು ಕಂಡು ಪ್ರಯಾಣಿಕರು ಆತಂಕಗೊಂಡರು. ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Gujarat: Fire broke out after a tanker overturned on the Ahmedabad-Mumbai National Highway near Vaghaldhara village in Valsad district. Several fire tenders along with Dungri Police have reached the spot. #bullet #train #working #NH #location pic.twitter.com/a2NtxeeCe4
— Shower Thoughts (@ShwrrThght) February 21, 2024