ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ಪೌಷ್ಠಿಕ ಆಹಾರವಾದ ರಾಗಿ ಮಾಲ್ಟ್‌ನ್ನು ನೀಡಲಾಗುತ್ತದೆ.
ಇಂದು ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದ್ದು, ರಾಜ್ಯ ಸರ್ಕಾರ ಒಟ್ಟಾರೆ ೬೦ ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸಿಎಂ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ರಾಗಿಯಲ್ಲಿರುವ ಕ್ಯಾಲ್ಶಿಯಂ, ಪ್ರೋಟೀನ್ ಇನ್ನಿತರ ಗುಣಗಳಿಂದ ಇದು ಸೂಪರ್ ಫುಡ್ ಎನಿಸಿಕೊಳ್ಳುತ್ತದೆ. ಮಕ್ಕಳಿಗೆ ಮಾಲ್ಟ್ ಅತ್ಯಗತ್ಯ ಎಂದಿದ್ದಾರೆ.