‘ಕಮಲ’ ಪಡೆಗೆ ಮತ್ತೊಂದು ಶಾಕ್: ‘ಕೈ’ ಜೊತೆ ಮತ್ತೆ ಒಂದಾದ ಮುದ್ದಹನುಮೇಗೌಡ‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ಇನ್ನೇನು ಕೆಲವು ತಿಂಗಳುಗಳು ಬಾಕಿ ಇವೆ. ಈ ಹಂತದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಾಜಿ ಸಂಸದ ಮುದ್ದಹನುಮೇಗೌಡ‌ ಅವರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.

ಹೌದು, ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಬಿಜೆಪಿಗೆ ವಿದಾಯ ಹೇಳಿ ಕಾಂಗ್ರೆಸ್ ಜೊತೆ ಕೈ ಜೋಡಿಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಇವರುಗಳ ಉಪಸ್ಥಿತಿಯಲ್ಲಿ ಮುದ್ದಹನುಮೇಗೌಡ‌ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಅಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!