ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸದ್ಯದ ಅಪ್ಡೇಟ್ ಪ್ರಕಾರ ಮಾಜಿ ಸಚಿವ ಡಾ.ಕೆ.ಸುಧಾಕರ್ ಮತ್ತೆ ಕಾಂಗ್ರೆಸ್ ಗೆ ಮರಳಲಿದ್ದಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.
ಕೆಲ ದಿನಗಳ ಹಿಂದೆ ಸುಧಾಕರ್ ಪಕ್ಷಕ್ಕೆ ಮರಳುವ ಕುರಿತು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿಕ್ಕಬಳ್ಳಾಪುರ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
ಆದರೆ, ಶಾಸಕ ಪ್ರದೀಪ್ ಈಶ್ವರ್ ಅವರು ಮಾತನಾಡಿ, ಅಂತಹ ವಿಷಯಗಳನ್ನು ನಿರ್ಧರಿಸುವಷ್ಟು ದೊಡ್ಡವನು ನಾನಲ್ಲ. ಪಕ್ಷದ ನಾಯಕತ್ವ ಮತ್ತು ಮುಖ್ಯಮಂತ್ರಿಗಳ ನಿರ್ಧಾರಗಳನ್ನು ಪಾಲಿಸುವುದಾಗಿ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಇತರ ಮುಖಂಡರ ಜತೆ ಮಾತುಕತೆ ನಡೆಸಿದ ಸುಧಾಕರ್, ನಿರಂತರವಾಗಿ ಕಾಂಗ್ರೆಸ್ ಬಾಗಿಲು ತಟ್ಟಿದ್ದಾರೆ ಎನ್ನಲಾಗಿದೆ. ಇದಕ್ಕೆ ಬಿಜೆಪಿ ಯಾವ ರೀತಿ ಪ್ರತಿಕ್ರಿಯೆ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.