ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾಂಟ್ನಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕನ ಬಳಿ ಸುಮಾರು 22.5 ಲಕ್ಷ ಮೌಲ್ಯದ 367 ಗ್ರಾಂ ಚಿನ್ನ ಪತ್ತೆಯಾಗಿದೆ.
ಶಾರ್ಜಾದಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನೊಬ್ಬ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವ್ಯಕ್ತಿ ಕಸ್ಟಮ್ಸ್ ಅಧಿಕಾರಿಗಳ ಗಮನ ಸೆಳೆಯಲು ಬ್ರಾಂಡ್ ಪ್ಯಾಂಟ್ ಧರಿಸಿದ್ದರು. ಆತನ ಪ್ಯಾಂಟ್ನ ಹಲವು ಪದರಗಳಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದ ಎನ್ನಲಾಗಿದೆ.
ಪೌಡರ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ವರ್ಗಾಯಿಸಲು ಯತ್ನಿಸಿದ ಆರೋಪಿಯನ್ನು ಬಂಧಿಸಲಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಚಿನ್ನದ ಪುಡಿಯನ್ನು ಪಡೆಯಲು ಆತನ ಪ್ಯಾಂಟ್ ಅನ್ನು ಕತ್ತರಿಸಿದ್ದಾರೆ.