ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಸೇನೆಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ (87) ಅವರು ನಿಧನರಾಗಿದ್ದಾರೆ. ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಕೆಲವು ತಿಂಗಳ ಹಿಂದೆ ಮನೋಹರ್ ಜೋಶಿ ಮೆದುಳಿನ ರಕ್ತಸ್ರಾವದಿಂದ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಅನಾರೋಗ್ಯದ ಕಾರಣ ಕಳೆದ ಕೆಲವು ದಿನಗಳಿಂದ ಮನೋಹರ್ ಜೋಶಿ ಅವರು ಸಕ್ರಿಯ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದರು.
ಮನೋಹರ್ ಜೋಶಿ ಅವರು ಪತ್ನಿ ಅನಘಾ ಜೋಶಿ, ಓರ್ವ ಪುತ್ರ ಉನ್ಮೇಶ್, ಪುತ್ರಿಯರಾದ ಅಸ್ಮಿತಾ ಮತ್ತು ನಮ್ರತಾ ಅವರನ್ನು ಅಗಲಿದ್ದಾರೆ.