ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಹಾಗೂ ಬೈಕ್ ನಡುವಿನ ಭೀಕರ ರಸ್ತೆ ಅಪಘಾತಕ್ಕೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ (Raybag) ತಾಲೂಕಿನ ಮುಗಳಖೋಡ ಕಾಲುವೆ ಬಳಿ ಜತ್ತ-ಜಾಂಬೋಟಿ ರಸ್ತೆಯಲ್ಲಿ ಸಂಭವಿಸಿದೆ.
ಬೈಕ್‌ಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.