ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾ.ಸಿ.ಎನ್ ಮಂಜುನಾಥ್ (Dr.C.N Manjunath) ಅವರು ರಾಜಕೀಯಕ್ಕೆ ಬರುವ ಬಗ್ಗೆ ಚರ್ಚೆ ನಡೆಯುತ್ತಿರುವ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದ್ದು, ಡಾ.ಸಿ.ಎನ್ ಮಂಜುನಾಥ್ ಸಲ್ಲಿಸಿರುವ ವೈದ್ಯಕೀಯ ಸೇವೆಯ ಬಗ್ಗೆ ಎಲ್ಲರಲ್ಲೂ ಒಳ್ಳೆಯ ಭಾವನೆ ಇದೆ. ಅವರ ಬಗ್ಗೆ ಅಪಾರ ಗೌರವ ಇದೆ. ಕೆಲವರು ಅವರನ್ನು ರಾಜಕೀಯಕ್ಕೆ ತರಬೇಕು ಎಂಬ ಆಶಯ ವ್ಯಕ್ತಪಡಿಸ್ತಿದ್ದಾರೆ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೆ ಬರುವ ಬಗ್ಗೆ ನಾನೇನು ತೀರ್ಮಾನ ಮಾಡಿಲ್ಲ ಎಂದು ಡಾ.ಮಂಜುನಾಥ್ ಅವರೇ ಹೇಳಿದ್ದಾರೆ. ಏನು ತೀರ್ಮಾನ ಮಾಡುತ್ತಾರೆ ಎಂದು ಸಮಯ ಬಂದಾಗ ನೋಡೋಣ ಎಂದಿದ್ದಾರೆ.
ಬಿಜೆಪಿ – ಜೆಡಿಎಸ್ ಮೈತ್ರಿ ಸೀಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಸೀಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಹಾಗೂ ಸಮಸ್ಯೆ ಇಲ್ಲ. ನಾವು 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಬೇಕು. ಇಂತಹ ಕೆಟ್ಟ ಸರ್ಕಾರ ಕಿತ್ತು ಹಾಕಬೇಕು ಎಂದಿದ್ದಾರೆ.