ಹೊಸದಿಗಂತ ವರದಿ, ಬಳ್ಳಾರಿ:
ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಅಡವಿ ಸ್ವಾಮಿ ಅವರು ನೇಮಕಗೊಂಡಿದ್ದಾರೆ.
ಈ ಕುರಿತು ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದು, ನೀಡಿದ ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯಿಂದ ಇಂದಿನಿಂದಲೇ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯಲ್ಲಿ ತೊಡಗಬೇಕು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುವ ಮೂಲಕ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ತೇಜಸ್ವಿ ಸೂರ್ಯ ಇತರರಿದ್ದರು.