ಬಸ್ ನಿಲ್ದಾಣಗಳಲ್ಲಿ ಚಿನ್ನಾಭರಣಗಳ ಕಳವು: ಮೂವರು ಆರೋಪಿಗಳ ಬಂಧನ

ಹೊಸದಿಗಂತ ವರದಿ,ವಿಜಯಪುರ:

ಬಸ್ ನಿಲ್ದಾಣಗಳಲ್ಲಿ ಬಸ್ ಏರುವಾಗ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗಂಗೂಬಾಯಿ ಕಾಳೆ, ನರಸಮ್ಮ ಪಾಟೀಲ, ಕರಿಷ್ಮಾ ಉಪಾಧ್ಯೆ ಬಂಧಿತ ಆರೋಪಿಗಳು.

ಈ ಆರೋಪಿಗಳು ನಗರದ ಕೇಂದ್ರ ಬಸ್ ನಿಲ್ದಾಣ ಹಾಗೂ ಸೇಟ್‌ಲೈಟ್ ಬಸ್ ನಿಲ್ದಾಣದಲ್ಲಿ 9 ಕಳ್ಳತನ ಕೇಸ್‌ಗಳಲ್ಲಿ 8.70 ಲಕ್ಷ ಮೌಲ್ಯದ 146 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಋಷಿಕೇಸ್ ಸೋನವಾಣೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!