ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಪಕ್ಷ, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮಹತ್ವದ ಹೆಜ್ಜೆ ಇಟ್ಟಿದೆ. ಅಸ್ಸಾಂ ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.
ಈ ವರ್ಷದ ಮೊದಲಾರ್ಧದಲ್ಲಿ ಚುನಾವಣೆ ನಡೆಯಲಿರುವ ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸುವ ನಿರ್ಧಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ. ಅಸ್ಸಾಂ ಜೊತೆಗೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿಯೂ ನಾಲ್ಕು ಸದಸ್ಯರ ಸಮಿತಿಗಳನ್ನು ರಚಿಸಲಾಗಿದೆ.
ಇದನ್ನೂ ಓದಿ: FOOD | ಜಿಮ್ ಪ್ರಿಯರೂ ಈ ಸ್ನ್ಯಾಕ್ಸ್ ತಿನ್ನಬಹುದು, ಚಿಕನ್ ಪಕೋಡಾ ಹೀಗೆ ಮಾಡಿ
ಅಸ್ಸಾಂ ಸಮಿತಿಯ ಅಧ್ಯಕ್ಷರಾಗಿ ಪ್ರಿಯಾಂಕಾ ಗಾಂಧಿ ನೇಮಕವಾಗಿದ್ದು, ಅವರೊಂದಿಗೆ ಇಮ್ರಾನ್ ಮಸೂದ್, ಸಪ್ತಗಿರಿ ಶಂಕರ್ ಉಲಕಾ ಮತ್ತು ಸಿರಿವೆಲ್ಲಾ ಪ್ರಸಾದ್ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಈ ಸಮಿತಿ ಮುಂಬರುವ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಜವಾಬ್ದಾರಿ ವಹಿಸಲಿದೆ.

