ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಮಾರು ಮೂರು ವರ್ಷಗಳಿಂದ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪತಿ ಹಾಗೂ ಪತ್ನಿ ಇಬ್ಬರಿಗೂ ಕೂಡ ವರ್ಗಾವಣೆ ನಡೆಯದ ಹಿನ್ನೆಲೆ, ನಮಗೆ ಕರ್ತವ್ಯವನ್ನು ನಿರ್ವಹಿಸಲು ಸಾಧ್ಯವಿಲ್ಲದ ಕಾರಣ ದಯಾಮರಣ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗಳಿಗೆ ಪೊಲೀಸ್ ಸಿಬ್ಬಂದಿ ಪತ್ರ ಬರೆದಿದ್ದಾರೆ.
ಪತಿ ಒಂದು ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಪತ್ನಿ ಒಂದು ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಈ ಕಾರಣದಿಂದಾಗಿ, ದಂಪತಿಗಳು ಒಟ್ಟಿಗೆ ವಾಸಿಸಲು ಸಾಧ್ಯವಾಗುತ್ತಿಲ್ಲ. ಒಂದಾ ಪತ್ನಿ ಇರುವ ಜಿಲ್ಲೆಗೆ ವರ್ಗಾವಣೆ ಕೊಡಿ, ಇಲ್ಲಾ ದಯಾಮರಣ ಕೊಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ವಿಚ್ಛೇದನ ಪ್ರಕರಣಗಳೂ ಹೆಚ್ಚುತ್ತಿವೆ. ಕೆಲವು ಸಿಬಂದಿಗಳು ವಯಸ್ಸಾದ ಪೋಷಕರನ್ನು ನೋಡಿಕೊಳ್ಳಬೇಕು. ಹಾಗಾಗಿ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದೆ. ವರ್ಗಾವಣೆ ಮಾಡುವುದಾಗಿ ಸಿಎಂ ಹಾಗೂ ಗೃಹ ಸಚಿವರು ಕೇವಲ ಬಾಯಿ ಮಾತಿನಲ್ಲಿ ಹೇಳುತ್ತಾರೆ. ಆದರೆ, ರಾಜ್ಯಾದ್ಯಂತ ಹಲವು ಠಾಣೆಗಳ ಅಧಿಕಾರಿಗಳು ವರ್ಗಾವಣೆಯನ್ನು ಲಿಖಿತ ರೂಪದಲ್ಲಿ ಮಾಡಿಲ್ಲ ಎಂದು ಪತ್ರ ಬರೆದಿದ್ದಾರೆ.