ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ಮೂರು ತಲೆಮಾರುಗಳಿಂದ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ರೈತನಿಗೆ ಒತ್ತುವರಿ ಜಾಗ ತೆರವಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿದ್ದರಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗಿರಿಗೌಡ (65) ಮೃತ ರೈತ ಎಂದು ಗುರುತಿಸಲಾಗಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಗಿರಿಗೌಡ ಮೂರು ತಲೆಮಾರುಗಳಿಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದಾರೆ. ಆದರೆ, ಅರಣ್ಯ ಪ್ರದೇಶವಾಗಿದ್ದು, ತೆರವು ಮಾಡಬೇಕು ಎಂದು ಅರಣ್ಯ ಇಲಾಖೆ ನೋಟಿಸ್ ನೀಡಿದೆ.
ನಾಲ್ಕು ದಿನಗಳ ಹಿಂದೆ ಗಿರಿಗೌಡ ಕೂಡ ವಿಷ ಸೇವಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಹೇಳಿದ್ದರು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.