ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವಿನ ದೋಸ್ತಿ ಮತ್ತೆ ಚಿಗುರೊಡೆದಿದ್ದು, ಭಾರತೀಯ ಮೈತ್ರಿಕೂಟದ ಭಾಗವಾಗಿ ಎರಡೂ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿವೆ. ಇದರಿಂದ ಸೀಟು ಹಂಚಿಕೆ ಪ್ರಕ್ರಿಯೆಯೂ ಪೂರ್ಣಗೊಂಡಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂತಿಮ ಸೀಟು ಹಂಚಿಕೆ ಮಾತುಕತೆ ಮುಕ್ತಾಯವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ನಾಲ್ಕು ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ಮೂರು ಕ್ಷೇತ್ರಗಳಿಂದ ಸ್ಪರ್ಧಿಸಲು ಸೂತ್ರ ಸಿದ್ಧಪಡಿಸಿದೆ ಎನ್ನಲಾಗಿದೆ.
ಆಮ್ ಆದ್ಮಿ ಸ್ಪರ್ಧಿಸುವ ಕ್ಷೇತ್ರಗಳ ವಿವರ ಇಂತಿವೆ:
ನವದೆಹಲಿ, ದಕ್ಷಿಣ ದೆಹಲಿ, ಪಶ್ಚಿಮ ದೆಹಲಿ, ಪೂರ್ವ ದೆಹಲಿ ಕ್ಷೇತ್ರಗಳಲ್ಲಿ ಆಪ್ ಪಕ್ಷವು ಸ್ಪರ್ದಿಸಲಿದೆ.
ಕಾಂಗ್ರೆಸ್ ಸ್ಪರ್ಧಿಸುವ ಕ್ಷೇತ್ರಗಳ ವಿವರ ಇಂತಿವೆ:
ಚಾಂದಿನಿ ಚೌಕ್, ಈಶಾನ್ಯ ದೆಹಲಿ, ವಾಯವ್ಯ ದೆಹಲಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಸ್ಪರ್ದಿಸಲಿದೆ.