ಹೊಸದಿಗಂತ , ಮೈಸೂರು:
ಸಂವಿಧಾನದ ಜಾಗೃತಿ ಜಾಥಾದಲ್ಲಿ ಮೈಸೂರು ವಿಭಾಗದಲ್ಲಿ ಮೈಸೂರು ಜಿಲ್ಲೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿದ್ದಕ್ಕಾಗಿ ಉತ್ತಮ ಕಾರ್ಯಕ್ರಮ ಆಯೋಜನೆ (ಆಕ್ಟಿವಿಟಿ) ವಿಭಾಗದಲ್ಲಿ ಪ್ರಥಮ ಸ್ಥಾನ ಲಭಿಸಿದೆ.
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಜಾಗೃತಿ ಐಕ್ಯತಾ ಸಮಾವೇಶ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹಾದೇವಪ್ಪ ಪ್ರಶಸ್ತಿ ಪ್ರದಾನ ಮಾಡಿದರು.
ಈ ಪ್ರಶಸ್ತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸ್ವೀಕರಿಸಿದರು.