ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಸತ್ತೂರು ಬಳಿಯ ಪಟಾಕಿ ಘಟಕದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಕಾರ್ಮಿಕ ಸಾವನ್ನಪ್ಪಿದ್ದಾನೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಅವಘಡದಲ್ಲಿ ಸುಮಾರು ಮೂರು ಕೊಠಡಿಗಳು ಹಾನಿಗೊಳಗಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ.
ಫೆಬ್ರವರಿ 18, 2024 ರಂದು ವೆಂಬಕೊಟ್ಟೈ ಬಳಿಯ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮಂದಿ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಮತ್ತೊಂದು ಸ್ಪೋಟ ಸಂಭವಿಸಿದೆ. ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ, ವಿರುಧುನಗರ ಜಿಲ್ಲೆಯ ವಿವಿಧ ಪಟಾಕಿ ಘಟಕಗಳು ಮತ್ತು ಅಂಗಡಿಗಳಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಕನಿಷ್ಠ 269 ಜನರು ಸಾವನ್ನಪ್ಪಿದ್ದಾರೆ.