ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾದಕವಸ್ತು ಕಂಟ್ರೋಲ್ ಬ್ಯೂರೋ ಮತ್ತು ದೆಹಲಿ ಪೊಲೀಸರು ಪ್ರಮುಖ ಡ್ರಗ್ ದಂಧೆಯನ್ನು ಭೇದಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 3,500 ಕೆಜಿ ಸ್ಯೂಡೋಫೆಡ್ರಿನ್ ಮಾದಕ ದ್ರವ್ಯವನ್ನು ಕಳ್ಳಸಾಗಣೆ ಮಾಡಿದ ಜಾಲದಲ್ಲಿ ತಮಿಳು ಚಲನಚಿತ್ರ ನಿರ್ಮಾಪಕ ಪ್ರಮುಖ ಸಂಚುಕೋರ ಎಂದು ಎನ್‌ಸಿಬಿ ಮಾಹಿತಿ ನೀಡಿದ್ದಾರೆ.
ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಅಧಿಕಾರಿಗಳು ನಾಲ್ಕು ತಿಂಗಳ ಹಿಂದೆ ಮಾದಕವಸ್ತು ಕಳ್ಳಸಾಗಣೆ ಜಾಲದ ಬಗ್ಗೆ ಎನ್‌ಸಿಬಿಗೆ ಎಚ್ಚರಿಕೆ ನೀಡಿದ್ದರು, ಇದರ ನಂತರ ಎನ್‌ಸಿಬಿ ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಮೂವರು ಶಂಕಿತರನ್ನು ಬಂಧಿಸಿದ್ದಾರೆ.
ಪ್ರಕರಣದ ಹೆಚ್ಚಿನ ತನಿಖೆಯಲ್ಲಿ ತಮಿಳು ಚಲನಚಿತ್ರ ನಿರ್ಮಾಪಕ ಡ್ರಗ್ ದಂಧೆಯ ಮಾಸ್ಟರ್ ಮೈಂಡ್ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.