ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹೆಚ್ಚಾಗಿದ್ದು, ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ.
30 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಶಿವಮೊಗ್ಗದ ಮೆಗ್ಗಾನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಐದು ದಿನಗಳ ಹಿಂದಷ್ಟೇ ಸಿದ್ದಾಪುರದಲ್ಲಿ ಮಹಿಳೆಯೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದರು. ಇದೀಗ ಉತ್ತರಕನ್ನಡದಲ್ಲಿ ಮಂಗನ ಕಾಯಿಲೆಗೆ ಬಲಿಯಾದವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.