ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಸಿನಿಮಾ ಶೂಟಿಂಗ್ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸದಾ ಜನರಿಂದ ತುಂಬಿರುವ ಬೆಂಗಳೂರಿನ ಪ್ರಮುಖವಾದ ಚರ್ಚ್ ಸ್ಟ್ರೀಟ್‌ನಲ್ಲಿ ಇನ್ಮುಂದೆ ಚಲನಚಿತ್ರ ಚಿತ್ರೀಕರಣ ಮಾಡುವಂತಿಲ್ಲ.

Bangalore Must Visit Place | Church Street | Full day I spend on church street Bangalore | - YouTubeಹೌದು, ಸಂಚಾರ ದಟ್ಟಣೆ ಕಾರಣದಿಂದಾಗಿ ಬಿಬಿಎಂಪಿ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ಕಳೆದ ಭಾನುವಾರ ಚರ್ಚ್ ಸ್ಟ್ರೀಟ್‌ನಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು.

ಇದನ್ನು ಗಮನಿಸಿದ ನಂತರ ಚರ್ಚ್ ಸ್ಟ್ರೀಟ್‌ನಲ್ಲಿ ಶೂಟಿಂಗ್‌ಗೆ ನಿರ್ಬಂಧ ವಿಧಿಸಲಾಗಿದೆ. ಸೂಕ್ತ ಅನುಮತಿ ಪಡೆಯದೆ ಚಿತ್ರೀಕರಣ ಮಾಡಲಾಗಿದೆ ಎನ್ನುವ ಆರೋಪ ಬಂದಿದ್ದು, ಚಿತ್ರತಂಡ ಪೊಲೀಸರಿಂದ ಅನುಮತಿ ಪಡೆದಿದ್ದೇವೆ ಎಂದು ಹೇಳಿತ್ತು.

Bengaluru's Church Street Gets A Rs 9 Crore Makeoverಆದರೆ ಪೊಲೀಸರು ಶೂಟಿಂಗ್‌ಗೆ ಅನುಮತಿ ನೀಡಿಲ್ಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಅನುಮತಿ ಪಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಕೆಎಫ್‌ಸಿಸಿ ಕೂಡ ಸ್ಪಷ್ಟನೆ ನೀಡಿದ್ದು, ಯಾವುದೇ ಅನುಮತಿ ಪಡೆದಿಲ್ಲ ಎಂದು ಹೇಳಲಾಗಿದೆ.

ಪಾದಚಾರಿ ಮಾರ್ಗದಲ್ಲಿ ಶೂಟಿಂಗ್ ನಡೆಯುತ್ತಿದ್ದು, ನೂರಾರು ಮಂದಿ ಶೂಟಿಂಗ್ ನೋಡಲು ನಿಂತಿದ್ದರು. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!