ದಿನಗೂಲಿ ನೌಕರರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಡೆ: 10 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಜಿಪ್ಟ್​ ರಾಜಧಾನಿಯ ನೈಲ್​​ ನಲ್ಲಿ ದಿನಗೂಲಿ ನೌಕರರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ ಸುಮಾರು 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗಿಜಾದ ಮೊನ್ಶಾತ್​ ಎಲ್​-ಕನಾಟರ್ ಪಟ್ಟಣದಲ್ಲಿ ದೋಣಿ ಮಗುಚಿ ಬಿದ್ದಿದೆ. ದೋಣಿಯಲ್ಲಿ ಸುಮಾರು 15 ದಿನಗೂಲಿ ನೌಕರರಿದ್ದರು. ಅವರನ್ನು ಸ್ಥಳೀಯ ನಿರ್ಮಾಣ ಕೆಲಸಕ್ಕೆ ಕಳುಹಿಸಲಾಗಿತ್ತು. ಈ ವೇಳೆ ದೋಣಿ ಅಪಘಾತ ಸಂಭವಿಸಿದೆ. ರಕ್ಷಣಾ ಪಡೆಗಳು ಮೃತ ದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.

ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈಜಿಪ್ಟ್ ಪರಿಹಾರ ನೀಡಲು ಮುಂದಾಗಿದೆ. ಮೃತರ ಕುಟುಂಬಕ್ಕೆ 5 ಲಕ್ಷ 35 ಸಾವಿರ ರೂಪಾಯಿ ಪರಿಹಾರ ನೀಡಲಾಗಿದೆ. ಬದುಕುಳಿದವರಿಗೆ 50,000 ರೂ. ಪರಿಹಾರವನ್ನು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!