ಟೈರ್​ ಫ್ಯಾಕ್ಟರಿಯಲ್ಲಿ ಬಾಯ್ಲರ್​ ಸ್ಫೋಟ: ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಮೀರತ್‌ನ ಟೈರ್​ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಈ ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂತ್ರಸ್ತರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎನ್ನಲಾಗಿದೆ.

ಸ್ಥಾವರದಲ್ಲಿ ಟೈರ್ ಕರಗಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಬಾಯ್ಲರ್ ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಸ್ಥಳಕ್ಕೆ ಎಸ್ಪಿ ದೇಹತ್ ಕಮಲೇಶ್ ಬಹದ್ದೂರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!