ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭಾ ಚುನಾವಣೆ ಫಲಿತಾಂಶ ಘೋಷಣೆಯಾದ ಬಳಿಕ, ವಿಧಾನಸೌಧದ ಆವರಣದಲ್ಲಿಯೇ ದೇಶದ್ರೋಹದ ಘೋಷಣೆ ಮೊಳಗಿರುವ ಘಟನೆ ನಡೆದಿದೆ.
ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್ ಹುಸೇನ್ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್ ಜಿಂದಾಬಾದ್ ಎನ್ನುವ ಘೋಷಣೆ ಕೂಗಿದ್ದಾರೆ. ನಾಸಿರ್ ಹುಸೇನ್ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಇದೇ ವೇಳೆ ಪಕ್ಕದಲ್ಲಿದ್ದ ಕೆಲ ಕಾರ್ಯಕರ್ತರು ಆತನ ಬಾಯಿಮುಚ್ಚಿಸಿರುವ ವಿಡಿಯೋ ವೈರಲ್ ಆಗಿದೆ.
ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ವಿಚಾರದ ಕುರಿತಾಗಿ ಮಾಧ್ಯಮಗಳು ಪ್ರಶ್ನೆ ಮಾಡಿವೆ. ಈ ವೇಳೆ ನಾಸಿರ್ ಹುಸೇನ್ ಸಿಡಿಮಿಡಿಗೊಂಡಿದ್ದಾರೆ.