ಹೊಸದಿಗಂತ ವರದಿ, ವಿಜಯಪುರ:
ವಸತಿ ಶಾಲೆಯಲ್ಲಿ ಅಗ್ನಿ ಅವಘಡದಿಂದ ಓರ್ವ ಬಾಲಕ ಗಂಭೀರ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಇಲ್ಲಿನ ಸಾಗರ ಗಂಭೀರ ಗಾಯಗೊಂಡಿದ್ದು, ಸಮರ್ಥ ಹಾಗೂ ಮಲ್ಲಿಕಾರ್ಜುನ ವಿದ್ಯಾರ್ಥಿಗಳು ಸಣ್ಣಪುಟ ಗಾಯಗೊಂಡಿದ್ದಾರೆ.
ಶಾರ್ಟ ಸರ್ಕ್ಯೂಟ್ ನಿಂದಾಗಿ ಹಾಸ್ಟೇಲ್ ಕೊಠಡಿಯಲ್ಲಿ ಅಗ್ನಿ ಅವಘಡ ಉಂಟಾಗಿ ಈ ಘಟನೆ ನಡೆದಿದೆ.
ಇಲ್ಲಿನ ವಸತಿ ಶಾಲೆ ಉದ್ಘಾಟನೆಯಾಗಿ ಕೇವಲ 6 ತಿಂಗಳು ಕಳೆದಿದ್ದು, ವಿದ್ಯಾರ್ಥಿಗಳು ಗಾಯಗೊಂಡಿರುವುದು ಇದು ಎರಡನೇ ಘಟನೆಯಾಗಿದೆ.
ಕೊಠಡಿಗಳಲ್ಲಿ 18 ವಿದ್ಯಾರ್ಥಿಗಳಿದ್ದರು, ಅದೃಷ್ಟವಶಾತ್ ಪಾರಾಗಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉಮೇಶ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.